ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಕುರಿತು ವಿಶಿಷ್ಟ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ.
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಸಿಬ್ಬಂದಿ ಚಿತ್ರಿಸಿರುವ ವಿಶಿಷ್ಟ ಕಲಾಕೃತಿಗೆ ಸಾರ್ವಜನಿಕರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ .ನಗರದ ಕೆಎಸ್ಆರ್ ರೈಲ್ವೆ ನಿಲ್ದಾಣದ ಸುತ್ತಮುತ್ತ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ಅದರಿಂದ ವಿಭಿನ್ನ ಹಾಗೂ ವಿಶೇಷವಾದ ಕಲಾಕೃತಿಯನ್ನು ನಿರ್ಮಿಸಲಾಗಿದೆ. ಆ ಮೂಲಕ ನಡೆಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಕುರಿತ ವಿಶಿಷ್ಟ ಜಾಗೃತಿ ಅಭಿಯಾನಕ್ಕೆ ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತವಾಗ್ತಿದೆ.
PublicNext
05/10/2022 11:45 am