ನೆಲಮಂಗಲ: ಕೆಲವು ದಿನಗಳಿಂದ ಚಿರತೆ ಹಾವಳಿಯಿಂದ ಕಂಗೆಟ್ಟಿದ್ದ ಗ್ರಾಮಸ್ಥರಿಗೆ ಸ್ವಲ್ಪ ರಿಲೀಫ್ ಸಿಕ್ಕಿದೆ.
ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ಸೋಂಪುರ ಹೋಬಳಿಯ ವೀರಸಾಗರ ಗ್ರಾಮದ ನರಸಿಂಹಮೂರ್ತಿ ಎಂಬುವವರ ತೋಟದಲ್ಲಿ ಅಳವಡಿಸಿದ್ದ ಬೋನಿಗೆ ಸುಮಾರು ಮೂರು ವರ್ಷ ಪ್ರಾಯದ ಹೆಣ್ಣು ಚಿರತೆ ಬಿದ್ದಿದೆ. ಕೆಲವು ವಾರಗಳಿಂದ ಗ್ರಾಮದಲ್ಲಿ ದಾಳಿ ನಡೆಸಿ 4-5 ಮೇಕೆ ಸೇರಿದಂತೆ ಇನ್ನುಳಿದ ಸಾಕು ಪ್ರಾಣಿಗಳನ್ನು ಬೇಟೆಯಾಡಿತ್ತು. ಹೀಗಾಗಿ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತೋಟದಲ್ಲಿಟ್ಟಿದ್ದ ಬೋನಿಗೆ ಇದೀಗ ಚಿರತೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ, ಸೆರೆ ಸಿಕ್ಕ ಚಿರತೆಯನ್ನು ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ರವಾನೆ ಮಾಡಿದ್ದಾರೆ.
ಸುಮಿತ್ರ, ಪಬ್ಲಿಕ್ ನೆಕ್ಸ್ಟ್,
ನೆಲಮಂಗಲ
PublicNext
22/09/2022 11:23 pm