ಬೆಂಗಳೂರು: ನೈರುತ್ಯ ಮುಂಗಾರು ಹಿಂದಿರುಗುವುದರೊಂದಿಗೆ ವಿವಿಧ ಹವಾಮಾನ ವ್ಯವಸ್ಥೆಗಳಿಂದಾಗಿ ಮುಂದಿನ ಐದು ದಿನಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಷ್ಟೇ ಅಲ್ಲ. ಈಶಾನ್ಯ ಮಾನ್ಸೂನ್ ಪ್ರಾರಂಭವಾಗುವುದರೊಂದಿಗೆ ಅಕ್ಟೋಬರ್‌ನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿ ಮತ್ತು ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದೆ.ಇದರಿಂದಾಗಿ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ.
ಕರ್ನಾಟಕದಲ್ಲಿ ಈ ಋತುವಿನಲ್ಲಿ ಶೇ.29ರಷ್ಟು ಅಧಿಕ ಮಳೆಯಾಗಿದೆ. ರಾಜ್ಯದಲ್ಲಿ ವಾಡಿಕೆಯಂತೆ ಸಾಮಾನ್ಯ 831.8 ಮಿ.ಮೀ ವಿರುದ್ಧವಾಗಿ 1,075.2 ಮಿಮೀ ಮಳೆಯಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ವಾಡಿಕೆ ಮಳೆ 550 ಮಿ.ಮೀ ವಿರುದ್ಧವಾಗಿ 1,066 ಮಿ.ಮೀ ಮಳೆಯಾಗಿದೆ.
PublicNext
06/10/2022 06:58 pm