ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರ ಗೊತ್ತಿಲ್ಲ : ಪಕ್ಷದ ಸಿದ್ಧಾಂತ ಒಪ್ಪಿ ಬರೋರಿಗೆ ಸ್ವಾಗತ - ಡಿಕೆ ಸುರೇಶ್

ಬೆಂಗಳೂರು: ಚನ್ನಪಟ್ಟಣ ಕೈ ಅಭ್ಯರ್ಥಿ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಆದ್ರೆ ಮೈತ್ರಿ ಪಕ್ಷ ಯಾರಿಗೆ ಟಿಕೆಟ್ ನೀಡಲಿದೆ ಎಂದು ಕಾದು ನೋಡುತ್ತಿದೆ. ಕಾಂಗ್ರೆಸ್. ಈ ನಡುವೆ ಯೋಗೇಶ್ವರ್ ಕಾಂಗ್ರೆಸ್ ಸೇರುವ ಚರ್ಚೆಗೆ ಉತ್ತರಿಸಿದ ಡಿಕೆ ಸುರೇಶ್, ಯೋಗೇಶ್ವರ್ ಅವರು ಪರಿಷತ್ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು ಹಾಗೂ ಅದು ಅಂಗೀಕಾರವಾಗಿರುವ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದಿದ್ದೇನೆ. ಅವರು ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಚನ್ನಪಟ್ಟಣದಲ್ಲಿ ಇಂದು ಸಭೆ ಮಾಡುತ್ತಿರುವುದು ಗೊತ್ತಿದೆ. ಇದರ ಹೊರತಾಗಿ ಅವರು ಕಾಂಗ್ರೆಸ್ ಸೇರುವ ಕುರಿತು ಯಾವುದೇ ವಿಚಾರ ಗೊತ್ತಿಲ್ಲ ಎಂದು ತಿಳಿಸಿದರು.

ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸುರೇಶ್ ಅವರು ಸ್ವಾಗತಿಸುತ್ತಾರಾ ಎಂಬ ಪ್ರಶ್ನೆಗೆ, ಚನ್ನಪಟ್ಟಣದಲ್ಲಿ ಕಳೆದ ಮೂರು ತಿಂಗಳಿನಿಂದ ಜೆಡಿಎಸ್ ಹಾಗೂ ಬಿಜೆಪಿಯಿಂದ ಬರುವ ಎಲ್ಲಾ ಮುಖಂಡರನ್ನು ನಾವು ಸ್ವಾಗತಿಸಿದ್ದೇವೆ. ಪಕ್ಷದ ತತ್ವ ಸಿದ್ಧಾಂತ, ನಾಯಕತ್ವ ಒಪ್ಪಿ ಬರುವವರಿಗೆ ಸ್ವಾಗತವಿದೆ. ಯೋಗೇಶ್ವರ್ ಅಥವಾ ಮತ್ತೊಬ್ಬರು ಎಂದು ಪ್ರತ್ಯೇಕಿಸಿ ಹೇಳುವುದಿಲ್ಲ. ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ವಿಚಾರ ನನ್ನ ಮುಂದೆ ಇಲ್ಲ. ಅವರು ಹಿರಿಯ ನಾಯಕರು ಮಾಜಿ ಸಚಿವರು, ಸಾಕಷ್ಟು ಅನುಭವ ಇರುವವರು. ಅವರ ಎನ್ ಡಿಎ ಮೈತ್ರಿ ಗಟ್ಟಿಯಾಗಿದ್ದು, ಅವರು ಯಾವ ತೀರ್ಮಾನ ಮಾಡುತ್ತಾರೆ ಕಾದು ನೋಡೋಣ” ಎಂದು ತಿಳಿಸಿದರು.

ಗುರುವಾರ ಯೋಗೇಶ್ವರ್ ಅವರು ಸೇರ್ಪಡೆಯಾಗಲಿದ್ದಾರೆ ಎಂದು ಚರ್ಚೆಯಾಗುತ್ತಿರುವ ಬಗ್ಗೆ ಕೇಳಿದಾಗ, ಚನ್ನಪಟ್ಟಣದ ಕಾರ್ಯಕರ್ತರು ನನಗೆ ಕರೆ ಮಾಡಿ ಯೋಗೇಶ್ವರ್ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡಲು ಸಭೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಈ ಸಭೆಯ ವಾಸ್ತವಾಂಶ ಏನು ಎಂದು ಸಂಜೆಯ ಒಳಗಾಗಿ ತಿಳಿಯಲಿದೆ ಎಂದು ತಿಳಿಸಿದರು.

Edited By : Suman K
PublicNext

PublicNext

22/10/2024 02:23 pm

Cinque Terre

14.22 K

Cinque Terre

1

ಸಂಬಂಧಿತ ಸುದ್ದಿ