ಬೆಂಗಳೂರು: ರಾಜ್ಯಾದ್ಯಂತ ರೈತರು ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ. ಕಬ್ಬು ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ರೈತರ ಸಾಲ ಸಾವಿರಾರು ರುಪಾಯಿ ಸಾಲ ಮನ್ನಾ ಆಗ್ತಿಲ್ಲ. ಆದರೆ ಕೇಂದ್ರ ಸರ್ಕಾರ ಉದ್ಯಮಿ ಅದಾನಿಯ ಸಾವಿರಾರು ಕೋಟಿ ಸಾಲ, ತೆರಿಗೆ ಮನ್ನಾ ಮಾಡಿದೆ. ಆದ್ದರಿಂದ ಕರ್ನಾಟಕ ರಾಜ್ಯದ ರೈತರ 13 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ರೈತರು ಇದೇ ಸೆಪ್ಟೆಂಬರ್ 26ಕ್ಕೆ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸದ್ದಾರೆ.
ರೈತ ಮುಖಂಡ ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ರೈತಸಂಘ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘ ಒಟ್ಟಾಗಿ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿವೆ. ಎಂದು ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಯಲಹಂಕ ಮಾಧ್ಯಮ ಕೇಂದ್ರದಲ್ಲಿ ಪ್ರತಿಕ್ರಿಯೆ ನೀಡಿದರು.
Kshetra Samachara
21/09/2022 09:58 am