ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಏಕ ಬಳಕೆ ಪ್ಲಾಸ್ಟಿಕ್ ನಿಷೇಧ- ರಾಜ್ಯದಲ್ಲಿ 9 ಸಾವಿರ ಕಡೆ ದಾಳಿ: 4.33 ಕೋಟಿ ದಂಡ ವಸೂಲಿ

ಬೆಂಗಳೂರು: ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಜಾರಿಯಾದ ನಂತರದಿಂದ ಇದುವರೆಗೆ ರಾಜ್ಯದಲ್ಲಿ ಒಂಬತ್ತು ಸಾವಿರಕ್ಕೂ ಅಧಿಕ ದಾಳಿಗಳನ್ನು ನಡೆಸಿ, ನಿಯಮ ಉಲ್ಲಂಘಿಸಿದವರಿಂದ 4.33 ಕೋಟಿ ರೂ.ದಂಡ ವಸೂಲು ಮಾಡಲಾಗಿದೆ ಎಂದು ವಿಧಾನ ಪರಿಷತ್ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬಿಜೆಪಿಯ ಮುನಿರಾಜುಗೌಡ ಮತ್ತು ಕಾಂಗ್ರೆಸ್‌ನ ಪ್ರಕಾಶ್ ರಾಠೋಡ್ ಕೇಳಿದ ಜಂಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರಿಸರಕ್ಕೆ ಹಾನಿಕಾರವಾದ ಏಕ ಬಳಕೆ ಪ್ಲಾಸ್ಟಿಕ್ ನಿಷೇಸಿ 2016ರಲ್ಲಿ ಆದೇಶ ಹೊರಡಿಸಲಾಗಿದೆ. ಅಲ್ಲಿಂದ ಈಚೆಗೆ ನಿಯಮ ಉಲ್ಲಂಘಿಸಿದ ಪ್ಲಾಸ್ಟಿಕ್ ಉತ್ಪಾದಕರು, ತ್ಯಾಜ್ಯ ಉತ್ಪಾದಕರು, ಸಗಟು ವ್ಯಾಪಾರಿಗಳು ಹಾಗೂ ಬೀದಿ ವ್ಯಾಪಾರಿಗಳಿಗೆ ವಿವಿಧ ಹಂತಗಳಲ್ಲಿ ದಂಡ ವಿಸಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಸಲ್ಲಿಸಿರುವ ವರದಿ ಪ್ರಕಾರ ಇದುವರೆಗೆ ಒಂಬತ್ತು ಸಾವಿರಕ್ಕೂ ಅಕ ದಾಳಿಗಳನ್ನು ನಡೆಸಿ, 4.33 ಕೋಟಿ ರೂ. ದಂಡ ವಸೂಲು ಮಾಡಲಾಗಿದೆ ಎಂದರು.

Edited By : Vijay Kumar
PublicNext

PublicNext

19/09/2022 09:38 pm

Cinque Terre

15.09 K

Cinque Terre

0

ಸಂಬಂಧಿತ ಸುದ್ದಿ