ಬೆಂಗಳೂರು: ನಗರಸಭೆ ಪುರಸಭೆ ಮತ್ತು ಇತರ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ತನ್ನ ಅನುಮೋದನೆ ನೀಡಿದೆ. ಈ ನೌಕರರು ಈಗ 17,000-28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ. 11,133 ಪೌರ ಕಾರ್ಮಿಕ ಖಾಯಂಯಾಗಿದ್ದು, ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಯಾಗಿದೆ. ಅನೇಕ ದಿನಗಳಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ ಒದಗಿಸಿದಂತಾಗಿದೆ. ಸಾಮಾಜಿಕ ನ್ಯಾಯದ ದಿಗ್ವಿಜಯ ಯಾತ್ರೆಯನ್ನು ಕರ್ನಾಟಕದ ಬಿಜೆಪಿ ಸರ್ಕಾರ ಮುಂದುವರಿಸಿದೆ.
ಈ ಪ್ರಸ್ತಾವಕ್ಕೆ ಅನುಮೋದ ನೀಡಿದ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸದಸ್ಯರೆಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆ ಎಂದು ಎಲ್ಲ ನಾಯಕರು ತಿಳಿಸುತ್ತಿದ್ದಾರೆ.
PublicNext
19/09/2022 10:23 pm