ಬೆಂಗಳೂರು: ಕಾಂಗ್ರೆಸ್ ನಾಯಕರು ಪೇ ಸಿಎಂ ಪೋಸ್ಟರ್ ಅಂಟಿಸಿದ ಪ್ರಕರಣ ಹಿನ್ನೆಲೆ ಹೈಗ್ರೌಂಡ್ಸ್ ಪೊಲೀಸರು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪೋಸ್ಟರ್ ಅಂಟಿಸಿದ ನಾಯಕರ ವಿರುದ್ಧ ಎನ್‌ಸಿಆರ್ ದಾಖಲಿಸಿದ್ದಾರೆ.
ರೇಸ್ ಕೋರ್ಸ್ ಗೋಡೆಗೆ ಪೇ ಸಿಎಂ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ನಾಯರು ಪ್ರತಿಭಟಿಸಿದ್ದರು. ಈ ಹಿನ್ನೆಲೆ ಪೊಲೀಸರು ಎನ್‌ಸಿಆರ್ ದಾಖಲಿಸಿದ್ದಾರೆ. ಇನ್ನೂ ಪೋಸ್ಟರ್ ಅಂಟಿಸಿದ ವಿಚಾರಕ್ಕೆ ಬೆಂಗಳೂರು ಟರ್ಫ್ ಕ್ಲಬ್ ವತಿಯಿಂದ ಯಾವುದೇ ದೂರು ನೀಡಿಲ್ಲ. ಸಂಬಂಧ ಪಟ್ಟವರು ದೂರು ನೀಡದ ಹಿನ್ನೆಲೆ ಎನ್‌ಸಿಆರ್ ದಾಖಲು ಮಾಡಿ ಪೊಲೀಸರು ಸುಮ್ಮನಾಗಿದ್ದಾರೆ.
PublicNext
24/09/2022 03:43 pm