ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 2 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಶಿವಣ್ಣ ಚಾಲನೆ

ಆನೇಕಲ್ ತಾಲೂಕಿನ ಹುಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ, ದೊಮ್ಮಸಂದ್ರ ಮುಖ್ಯ ರಸ್ತೆಯ ಬಯಲು ಬಸವೇಶ್ವರ ದೇವಸ್ಥಾನದಿಂದ, ಹಾರೋಹಳ್ಳಿ ಗ್ರಾಮದ ಹುಸ್ಕೂರು ಕೆರೆ ವರೆಗೂ ಸುಮಾರು 2 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಿ.ಶಿವಣ್ಣರವರು ಇಂದು ಭೂಮಿ ಪೂಜೆಯನ್ನು ನೆರವೇರಿಸಿದ್ರು.

ಇನ್ನು ಪೂಜೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಬಿ.ಶಿವಣ್ಣ ರವರು ಬಯಲು ಬಸವೇಶ್ವರ ದೇವಸ್ಥಾನ ದಿಂದ ಹಾರೋಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯು ಸುಮಾರು 20 ವರ್ಷಗಳಿಂದ ಹಾಳಾಗಿದು ಸಾರ್ವಜನಿಕರು ಓಡಾಡಲು ತುಂಬಾ ಸಮಸ್ಯೆಯಾಗುತ್ತಿದನ್ನು ಮನಗೊಂಡು ಶಾಸಕರ ವಿಶೇಷ ಅನುದಾನದಲ್ಲಿ ಈ ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಕಾಮಗಾರಿ ನಡೆಯುವಂತಹ ಸಂಧರ್ಭದಲ್ಲಿ ಸ್ಥಳೀಯರು ಹಾಗೂ ಜನಪ್ರತಿನಿಧಿಗಳು ಖುದ್ದು ಕಾಮಗಾರಿಯ ಗುಣಮಟ್ಟದಿಂದ ನಡೆಯುವಂತೆ ನೋಡಿ ಕೊಳ್ಳಬೇಕು ಎಂದು ಹೇಳಿದರು.

ಇನ್ನು ಕಾರ್ಯಕ್ರಮದಲ್ಲಿ ಹುಸ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾಪಮ್ಮ ಪಾಪಣ್ಣ, ಉಪಾಧ್ಯಕ್ಷೆ ಮುನಿರತ್ನಮ್ಮ ರಮೇಶ್, ಪಂಚಾಯಿತಿ ಸದಸ್ಯರಾದ ಗಣತಿ ಗಣ್ಯರು ಭಾಗಿಯಾಗಿದ್ದರು.

.

Edited By : PublicNext Desk
Kshetra Samachara

Kshetra Samachara

21/09/2022 06:52 pm

Cinque Terre

1.54 K

Cinque Terre

0

ಸಂಬಂಧಿತ ಸುದ್ದಿ