ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯುತ್ತಿರುವುದರಿಂದ ಶಾಸಕರು radisson ಬ್ಲೂ ಹೋಟೆಲ್ ಗೆ ಆಗಮಿಸುತ್ತಿದಾರೆ.
ಎರಡು ವಾರಗಳ ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವುದರಿಂದ ಖಾಸಗಿ ಹೊಟೇಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಸಿದೆ. ಇದೇ ವೇಳೆ ಮಾಜಿ ಶಾಸಕರು, ಮಾಜಿ ಸಚಿವರು, ಪರಾಜಿತ ಅಭ್ಯರ್ಥಿಗಳ ಸಭೆಯನ್ನೂ ಕೈ ನಾಯಕರು ಕರೆದಿದ್ದಾರೆ. ಹೀಗಾಗಿ ವಿಧಾನಸಭೆಯಲ್ಲಿ ಹೋರಾಟ ನಡೆಸಬೇಕಾದ ವಿಷಯಗಳ ಕುರಿತು ಶಾಸಕರು, ಪರಿಷತ್ ಸದಸ್ಯರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.
ಸದನದ ಒಳಗೂ, ಸದನದ ಹೊರಗೂ ಹೋರಾಟ ನಡೆಸುವ ಕುರಿತು ಗಂಭೀರ ಚರ್ಚೆಯಾಗ್ತಿದೆ. ಬಿಜೆಪಿಯ ಭ್ರಷ್ಟಾಚಾರ ವಿಚಾರ, ಕಮಿಷನ್ ಆರೋಪ, ನೇಮಕಾತಿ ಅಕ್ರಮ, ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರದ ಲೋಪ ಸೇರಿದಂತೆ ಹಲವು ವಿಚಾರಗಳ ಚರ್ಚೆಯಾಗ್ತಿದ್ದು, ಶಾಸಕಾಂಗ ಸಭೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಆರ್.ವಿ. ದೇಶಪಾಂಡೆ, ಯು.ಟಿ. ಖಾದರ್, ಎಸ್.ಎಸ್. ಮಲ್ಲಿಕಾರ್ಜುನ್, ಮಂಜುನಾಥ್, ಶಿವಾನಂದ್ ಪಾಟೀಲ್, ಪ್ರಿಯಾಂಕ್ ಖರ್ಗೆ ಆಗಮಿಸಿದ್ದಾರೆ.
PublicNext
13/09/2022 09:14 pm