ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: "ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿ ಅಸಾಧ್ಯ"; ಪಿಣರಾಯಿಗೆ ಬೊಮ್ಮಾಯಿ ಖಡಕ್‌ ಉತ್ತರ

ಬೆಂಗಳೂರು: ರಾಜ್ಯದ ಸೂಕ್ಷ್ಮ ಪರಿಸರ ಪ್ರದೇಶದಲ್ಲಿ, ವನ್ಯಜೀವಿಧಾಮಗಳಲ್ಲಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರಕ್ಕೆ ಸ್ಪಷ್ಟಪಡಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ದಕ್ಷಿಣ ವಲಯ ಪರಿಷತ್ತಿನ ಸಭೆಯಲ್ಲಿ ತೀರ್ಮಾನಿಸಿದಂತೆ ದ್ವಿಪಕ್ಷೀಯ ಮಾತುಕತೆ ನಡೆಸಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸಿದ್ದರು.

ಕಾಞಂಗಾಡ್- ಕಾಣಿಯೂರು ರೈಲು ಮಾರ್ಗ ಸೇರಿದಂತೆ ವಿವಿಧ ರೈಲ್ವೆ ಮತ್ತು ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಹಮತ ನೀಡುವಂತೆ ಕೇರಳ ಸರ್ಕಾರ ಕೋರಿತು. ಪ್ರಸ್ತಾಪಿತ ಕಾಞಂಗಾಡ್ – ಕಾಣಿಯೂರು ರೈಲು ಮಾರ್ಗವು ಕೇರಳದಲ್ಲಿ 40 ಕಿ.ಮೀ. ಹಾಗೂ ಕರ್ನಾಟಕದಲ್ಲಿ 31 ಕಿ.ಮೀ. ಮಾರ್ಗ ಹೊಂದಿದ್ದು, ರಾಜ್ಯಕ್ಕೆ ಇದರಿಂದ ಹೆಚ್ಚಿನ ಅನುಕೂಲಗಳಿಲ್ಲ. ಅಲ್ಲದೆ, ಪಶ್ಚಿಮ ಘಟ್ಟದ ಜೀವ ವೈವಿಧ್ಯ ಸೂಕ್ಷ್ಮ ಪ್ರದೇಶದಲ್ಲಿ ಹಾದು ಹೋಗುವ ಕಾರಣ ಒಪ್ಪಿಗೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ತಿಳಿಸಿದರು.

Edited By : Nagesh Gaonkar
PublicNext

PublicNext

18/09/2022 05:17 pm

Cinque Terre

27.61 K

Cinque Terre

1

ಸಂಬಂಧಿತ ಸುದ್ದಿ