ವರದಿ: ಬಲರಾಮ್ ವಿ.
ಬೆಂಗಳೂರು: ಬಿಜೆಪಿ ಪಕ್ಷವು ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ಹಿಡಿಯುವ ಮೂಲಕ ಮೇಲಿರಬಹುದು. ಆದ್ರೆ, ಒಂದಲ್ಲ ಒಂದು ದಿನ ಕೆಳಗೆ ಇಳಿಯಲೇಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದರು.
ಕೆಆರ್ ಪುರ ಕ್ಷೇತ್ರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೇವಸಂದ್ರದಲ್ಲಿ ಆಯೋಜಿಸಲಾಗಿದ್ದ ಭಾರತ್ ಜೋಡೋ ಕಾರ್ಯಕ್ರಮದ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು.
ಭಾರತ್ ಜೋಡೋ ಯಾತ್ರೆಯ ಮೂಲಕ ದೇಶದ ಜನರನ್ನು ಒಗ್ಗೂಡಿಸಲಾಗುತ್ತಿದೆ. ಈಗಾಗಲೇ ಕೇರಳ, ತಮಿಳುನಾಡಿನಲ್ಲಿ ಯಾತ್ರೆ ಯಶಸ್ವಿಯಾಗಿದ್ದು, ಕರ್ನಾಟಕದಲ್ಲಿ ಕೂಡಾ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂದರು. ಭಾರತ್ ಜೋಡೋ ಮೂಲ ಉದ್ದೇಶ ದೇಶವಾಸಿಗಳಿಗೆ ತಿಳಿದಿದ್ದು, ಮುಂದಿನ ದಿನಗಳಲ್ಲಿ ಭಾರತದ ಭವಿಷ್ಯ ಉಜ್ವಲವಾಗುತ್ತದೆ ಎಂದು ತಿಳಿಸಿದರು.
ಸದ್ಯಕ್ಕೆ ಬಿಜೆಪಿ ಮೇಲಿದ್ದು, ಒಂದಲ್ಲ ಒಂದು ದಿನ ಕೆಳಗಿಳಿಯಲೇಬೇಕು. ದೇಶದಲ್ಲಿ ಬಿಜೆಪಿಯವರು ಮಾಡುತ್ತಿರುವ ಅನಾಹುತಗಳನ್ನು ಜನರು ತಿಳಿಯಬೇಕು ಎಂದರು. ದೇಶದ ಐಕ್ಯತೆ ಹಾಗೂ ದೇಶಕ್ಕಾಗಿ ಸೇವೆ ಸಲ್ಲಿಸಿದವರನ್ನು ಸ್ಮರಿಸಬೇಕು ಎಂದು ಹೇಳಿದರು.
PublicNext
18/09/2022 10:09 pm