ಆನೇಕಲ್: ಸರ್ವಿಸ್ ರಸ್ತೆ ನೀಡದೇ ಲಾರಿ ಚಾಲಕರಿಗೆ ಕಿರುಕುಳ ನೀಡುತ್ತಿರುವುದನ್ನ ವಿರೋಧಿಸಿ ಅತ್ತಿಬೆಲೆ ಟೋಲ್ ಗೇಟ್ ಮುಂಭಾಗ ಟಿಪ್ಪರ್ ಲಾರಿ ಚಾಲಕರು ಹಾಗೂ ಮಾಲೀಕರು ಪ್ರತಿಭಟನೆಯನ್ನು ನಡೆಸಿದರು. ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಆಗಿದ್ದು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಟ್ಟರು
ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪವಿರುವ BETL ಟೋಲ್ ರಸ್ತೆ ಬಳಸದೇ ಇದ್ದರೂ ಟೋಲ್ ಶುಲ್ಕ ನೀಡಬೇಕೆಂದು ಲಾರಿ ಚಾಲಕರಿಗೆ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದ್ರೂ ಸಹ ಯಾವುದೇ ಪ್ರಯೋಜನ ಇಲ್ಲವೆಂದು ಚಾಲಕರು ಮತ್ತು ಲಾರಿ ಮಾಲೀಕರು BETL ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಇನ್ನು ನೂರಾರು ಲಾರಿ ಚಾಲಕರು ಹಾಗೂ ಮಾಲೀಕರು ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶವನ್ನು ಹೊರ ಹಾಕಿದ್ದಾರೆ. ಸದ್ಯ ಅತ್ತಿಬೆಲೆ ಟೋಲ್ ಸಿಬ್ಬಂದಿ ತಾತ್ಕಾಲಿಕವಾಗಿ ಲಾರಿಗಳನ್ನು ಬಿಡಲು ಒಪ್ಪಿಗೆಯನ್ನು ಸೂಚಿಸಿದ್ದು, ಮುಂದೆ ಡಿಸಿ ಕಚೇರಿಯಲ್ಲಿ ಸಭೆ ಕರೆಯುವವರೆಗೆ ಸರ್ವಿಸ್ ರಸ್ತೆಯಲ್ಲಿ ಲಾರಿ ಸಂಚಾರಕ್ಕೆ ಬಿಡುವುದಾಗಿ ಭರವಸೆಯನ್ನು ನೀಡಿದರು. ಒಂದೇ ವೇಳೆ ಸಮಸ್ಯೆ ಬಗೆಹರಿಸದೇ ಇದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಗೋಪಾಲ್ ರೆಡ್ಡಿ ಎಚ್ಚರಿಕೆ ನೀಡಿದರು.
ಹರೀಶ್ ಗೌತಮಾನಂದ, ಪಬ್ಲಿಕ್ ನೆಕ್ಸ್ಟ್, ಆನೇಕಲ್
PublicNext
19/09/2022 05:21 pm