ಬೆಂಗಳೂರು: ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕುರಿತ ಡೈಡ್ಯಾಕ್ಟಿಕ್ ಶೃಂಗಸಭೆಯು ತನ್ನ ವರದಿಯನ್ನು "ಬೆಂಗಳೂರು ಘೋಷಣೆ' ಎನ್ನುವ ಹೆಸರಿನಲ್ಲಿ ಹೊರತರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ( ಬಿಐಇಸಿ) ಇಂಡಿಯಾ ಡೈಡ್ಯಾಕ್ಟಿಕ್ ಅಸೋಸಿಯೇಷನ್ ಇಲ್ಲಿ ಆಯೋಜಿಸಿರುವ ಮೂರು ದಿನಗಳ ಏಷ್ಯಾ ಮಟ್ಟದ ಶೃಂಗಸಭೆಯನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಈ ಸಮಾವೇಶ ನಡೆಯುತ್ತಿದೆ.
ಶೃಂಗಸಭೆಯು ಮುಂದಿನ ಪೀಳಿಗೆಗಳಿಗೆ ಪರಿಹಾರ ಒದಗಿಸುವ ವೇದಿಕೆ ಆಗಬೇಕು. ಇವುಗಳನ್ನು ಜಾರಿಗೊಳಿಸಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಅವರು ಭರವಸೆ ನೀಡಿದರು.
PublicNext
21/09/2022 10:32 pm