ಬೆಂಗಳೂರು: ಪೇ ಸಿಎಂ ಪೋಸ್ಟರ್ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದು, ನಾವಯ ಪ್ರಜಾಪ್ರಭುತ್ವದ ಅಡಿ ಕೆಲಸ ಮಾಡ್ತಿದ್ದೇವೆ.೪೦% ಕಮಿಷನ್ ಸರ್ಕಾರ ಅಂತ ನಾವೆಲ್ಲ ಕ್ಯಾಂಪೇನ್ ಮಾಡಿದ್ದೇವೆ.
ಬಿಜೆಪಿ ವಿರುದ್ದ ಮಾಧ್ಯಮದ ಸೋರ್ಸ್ ರೇಟ್ ಕಾರ್ಡ್ ಬಳಸಿ ನಾವು ಕ್ಯಾಂಪೇನ್ ಮಾಡಿದ್ದೇವೆ. ಇದು ಸತ್ಯ ಪೋಸ್ಟರ್ ನ ೧.೯ ಲಕ್ಷ ಜನ ಇ ಡೌನ್ ಲೋಡ್ ಮಾಡಿಕೊಂಡಿದ್ದಾರೆ. ೮ಸಾವಿರ ದೂರು ದಾಖಲಾಗಿದೆ. ಇದು ರಾಜಕಾರಣದ ವ್ಯವಸ್ಥೆ. ನನ್ನ ಸಿದ್ದರಾಮಯ್ಯ ಫೋಟೋ ಕೂಡ ಅವರು ಪೋಸ್ಟರ್ ಮಾಡಿದ್ದಾರೆ.ಅಧಿಕಾರದಲ್ಲಿ ಇರುವವರು ಇದನ್ನು ಡೈಜೆಸ್ಟ್ ಮಾಡಿಕೊಳ್ಳಬೇಕು ರಾತ್ರೋ ರಾತ್ರಿ ಅರೆಸ್ಡ್ ಮಾಡಿರುವುದನ್ನು ಖಂಡಿಸುತ್ತೇನೆ ಎಂದು ಸಿಎಂ ಗೆ ಟಾಂಗ್ ನೀಡಿದ್ದಾರೆ. ಬಿಬಿಎಂಪಿ ಯವರಿಗೆ ಕಣ್ಣಿಲ್ವಾ? ಜನೋತ್ಸವದ್ದು ಅಷ್ಟೊಂದು ಪೋಸ್ಟರ್ ಹಾಕಿದ್ರು ಕೇಸ್ ಮಡಲಿಲ್ಲ. ರೆಡ್ಡಿ ಮುನಿರತ್ನ ಸುಧಾಕರ ಎಲ್ಲ ಪೋಸ್ಟರ್ ಹಾಕಿಲ್ವಾ? ಅದಕ್ಕೂ ಬಿಬಿಎಂಪಿ ಯಾಕೆ ಕೇಸ್ ಹಾಕಿಲ್ಲ ಅಂತ ಬಿಬಿಎಂಪಿ ವಿರುದ್ಧ ಡಿಕೆಶಿ ಕಿಡಿಕಾರಿದ್ದಾರೆ.
ಈ ವಿಚಾರಕ್ಕೆ ಸಿಎಂ ಯಾಕೆ ಅಷ್ಟು ತಲೆ ಕೆಡಿಸಿಕೊಳ್ತಿದ್ದಾರೆ? ನಾಳೆ ಎಲ್ಲ ಎಂಎಲ್‌ಸಿ ಎಂಎಲ್ಎಗಳು ನಾವೇ ಪೇಸಿಎಂ ಪೋಸ್ಟರ್ ಅಂಟಿಸುತ್ತೇವೆ. ಸರ್ಕಾರಿ ಕಟ್ಟಡಗಳ ಮೇಲೆ ಪೋಸ್ಟರ್ ಅಂಟಿಸುತ್ತೇವೆ ಅಧಿಕಾರ ದುರ್ಬಳಕೆ ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ಅಂತ ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದರು.
PublicNext
22/09/2022 03:09 pm