ಕಾಂಗ್ರೆಸ್ ಶಾಸಕರ ಸಭೆ ಅಂತ್ಯವಾಗಿದ್ದು, ಭಾರತ್ ಜೋಡೋ ವಿಚಾರವಾಗಿ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಎಐಸಿಸಿ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸಮ್ಮುಖದಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಎಐಸಿಸಿ ಸೆಕ್ರೆಟರಿಗಳು, ಭಾರತ ಜೋಡೋ ಯಶಸ್ವಿಗಾಗಿ ಮಾಡಿದ ಸಮಿತಿಗಳ ಅಧ್ಯಕ್ಷರ ಜೊತೆ ಸಭೆ ನಡೆಸಲಿದ್ದಾರೆ. ಭಾರತ್ ಜೋಡೋ ಯಾತ್ರೆಯ ಬಗ್ಗೆ ಅಂತಿಮ ಸುತ್ತಿನ ಸಭೆ ನಡೆಯಲಿದ್ದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.
PublicNext
23/09/2022 12:30 pm