ಬೆಂಗಳೂರು: ಸಿಎಂ ರೇಸ್ ಕೋರ್ಸ್ ನಿವಾಸದಲ್ಲಿ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಪೌರ ಕಾರ್ಮಿಕರ ಕಾಯಂ ಮಾಡುವ ತೀರ್ಮಾನವನ್ನು ಸಂಪುಟದಲ್ಲಿ ಸಿಎಂ ತೆಗೆದುಕೊಂಡಿದರು.ಇದೀಗ ರೇಸ್‌ವೀವ್ ನಿವಾಸದಲ್ಲಿ 500 ಕ್ಕೂ ಹೆಚ್ಚು ಪೌರಕಾರ್ಮಿಕರು ಉಪಹಾರ ಸೇವನೆಮಾಡಿದ್ದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ, ಸಿಸಿ ಪಾಟೀಲ್ ಪರಿಷತ್ ಸದಸ್ಯರಾದ ಚಲವಾದಿ ನಾರಾಯಣ ಸ್ವಾಮಿ, ಶಾಸಕ ಎನ್ ಮಹೇಶ್ ಮತ್ತಿತರರು ಉಪಸ್ಥಿತಿ ಇದ್ದರು.
ಈ ವೇಳೆ ಮಾತನಾಡಿದ ಸಿಎಂ ಇವತ್ತು ಪೌರ ಕಾರ್ಮಿಕರ ದಿನಾಚರಣೆ.ಈ ದಿನ ನಾವೆಲ್ಲರೂ ಉಪಹಾರ ಮಾಡಬೇಕು ಅಂದುಕೊಂಡಿದ್ವಿ. ಬಹಳ ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಒಂದು ಸಮಿತಿ ಮಾಡಿದ್ದೇವೆ. ಮೊದಲನೇ ಕಂತಲ್ಲಿ 11 ಸಾವಿರ ನೇಮಕಾತಿ ಮಾಡಿದ್ದೇವೆ. ಅವರ ಕಠಿಣ ಪರಿಶ್ರಮಕ್ಕೆ ಫಲ ಸಿಕ್ಕಿದೆ ಎಂಬ ಭರವಸೆ ಬಂದಿದೆ. ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯ ಮಾಡಿದ್ದೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
PublicNext
23/09/2022 01:58 pm