ಬೆಂಗಳೂರು: 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಅಭಿಯಾನ ಮಾಡ್ತಿದೆ. ಇದನ್ನ ಬಿಜೆಪಿ ಧೈರ್ಯವಾಗಿ ಎದುರಿಸುತ್ತೆ. ಕಾಂಗ್ರೆಸ್ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಯುಪಿಎ ಸರ್ಕಾರದಲ್ಲಿ ಎಷ್ಟು ಭ್ರಷ್ಟಾಚಾರದ ಪ್ರಕರಣಗಳು ಬಂದ್ವು. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಒಂದು ಭ್ರಷ್ಟಾಚಾರದ ಆರೋಪ ಇಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ವಿಜೇಯೇಂದ್ರ ಹೇಳಿದ್ದಾರೆ.
ಕಾಂಗ್ರೆಸ್ ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ದೇಶದಲ್ಲಿ ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ .ಪಕ್ಷ ಕಟ್ಟಕ್ಕೆ ರಾಹುಲ್ ಗಾಂಧಿ ಭಾರತಜೋಡೋ ಮಾಡ್ತಿದ್ದಾರೆ. ಇವರ 40% ಆರೋಪ - ಪೇಸಿಎಂ ಅಭಿಯಾನಕ್ಕೆ ಮುಂದಿನ ಚುನಾವಣೆಯಲ್ಲಿ ಜನರು ಉತ್ತರ ಕೊಡ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಿಜೇಯಂದ್ರ ಕಿಡಿಕಾರಿದ್ದಾರೆ.
PublicNext
24/09/2022 02:02 pm