ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಈದ್ಗಾದಲ್ಲಿ ರಾಜ್ಯೋತ್ಸವಕ್ಕೆ ಪಟ್ಟು

ಬೆಂಗಳೂರು : ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಗೊಂದಲ ಮುಗಿದಿದ್ದು,ಇದೀಗ ಕಂದಾಯ ಇಲಾಖೆಗೆ ಮತ್ತೊಂದು ಬಿಸಿ ಮುಟ್ಟಿದೆ.ಗಣೇಶ ಮಹೋತ್ಸವ ಆಚರಣೆಗೆ ಅವಕಾಶ ಸಿಗದೇ ಇದ್ದುದರಿಂದ ಜನರು ಕನ್ನಡ ರಾಜ್ಯೋತ್ಸವಕ್ಕೆ ಸಜ್ಜಾಗಿದ್ದಾರೆ.ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಜನರು ಪಟ್ಟು ಹಿಡಿದಿದ್ದಾರೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅವಕಾಶ ಕೊಡಬೇಕು ಎಂಬ ಕೂಗು ಎದ್ದಿದೆ. ಸ್ವಾತಂತ್ರೋತ್ಸವದ ಧ್ವಜಾರೋಹಣ ಯಾವುದೇ ಸಮಸ್ಯೆ ಇಲ್ಲದೆ ಜರುಗಿತು.ಆದ್ರೆ ಗಣೇಶೋತ್ಸವಕ್ಕೆ ಮಾತ್ರ ಅವಕಾಶ ಸಿಗಲಿಲ್ಲ .ಇನ್ನೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಹಾಗೂ ಹಿಂದೂಪರ ಸಂಘಟನೆಗಳು ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲೇಬೇಕೆಂದು ಪಟ್ಟುಹಿಡಿದಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ನಿಂದ ನಾಡಧ್ವಜ ಹಾರಿಸುವಂತೆ ಒತ್ತಡ ಕೇಳಿಬಂದಿದ್ದು,ಈ ಬಗ್ಗೆ ಸರ್ಕಾರಕ್ಕೆ ಚಾಮರಾಜಪೇಟೆ ನಾಗರಿಕ ಒಕ್ಕೂಟ ಮನವಿಮಾಡಿದೆ.ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಈ ಮೈದಾನದಲ್ಲಿ ಕನ್ನಡ ಬಾವುಟ ಹಾರಿಸಲಿ.2006 ರಲ್ಲೇ ಮೈದಾನದಲ್ಲಿ ನಾಡಧ್ವಜ ಹಾರಿಸುವುದಾಗಿ ಹೇಳಿದ್ರು .ಈಗ ಶಾಸಕ ಜಮೀರ್ ಅವರೇ ಖುದ್ದಾಗಿ ನಿಂತು ಕನ್ನಡ ಧ್ವಜ ಹಾರಿಸಲಿ .ಮೈದಾನ ಸರ್ಕಾರಿ ಸ್ವತ್ತೆಂದು ಘೋಷಣೆ ಆದ ಮೇಲೆ ಕನ್ನಡ ಧ್ವಜ ಹಾರಿಸಬೇಕು ಎಂದು ಒಕ್ಕೂಟದವರು ಹೇಳಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

28/09/2022 02:10 pm

Cinque Terre

1.45 K

Cinque Terre

0

ಸಂಬಂಧಿತ ಸುದ್ದಿ