ಬೆಂಗಳೂರು: ಭಾರತ ಜೋಡೋ ಯಾತ್ರೆಗೆ ಜನ ಸಾಮಾನ್ಯರಿಂದ ಪ್ರತಿಕ್ರಿಯೆ ಬರುತ್ತಿಲ್ಲ. ಕಷ್ಟ ಪಟ್ಟು ಬೇರೆ ಬೇರೆ ತಾಲೂಕುಗಳಿಂದ ಜನರನ್ನು ಕರೆತಂದು ಜನ ಪ್ರದರ್ಶನ ಮಾಡುತ್ತಿದ್ದಾರೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಶೋ ಮಾಡುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಈ ಶೋ ಮಾಡುತ್ತಿದ್ದಾರೆ. ಅವರ ಜೊತೆಗೆ ಪಾದಯಾತ್ರೆ ಮಾಡುವವರ ಸಂಖ್ಯೆ ಕಡಿಮೆಯಿದೆ. ರಾಜ್ಯದ ಬಗ್ಗೆಯೂ ಮಾತನಾಡುತ್ತಿದ್ದಾರೆ, ಆದರೆ ನಾವು ಈ ರೀತಿ ಸಣ್ಣತನ ರಾಜಕಾರಣ ಮಾಡುವುದಿಲ್ಲ ಎಂದರು.
ಕಾಂಗ್ರೆಸ್ ಪಕ್ಷದವರು ಪಾದಯಾತ್ರೆ ಮಾಡಿದರೆ ಮಾಡಲಿ, ಅದಕ್ಕೆ ಆಕ್ಷೇಪವಿಲ್ಲ. ಆದರೆ, ಈ ಮಧ್ಯೆ ಕರ್ತವ್ಯದಲ್ಲಿರುವ ಅಧಿಕಾರಿಗಳಿಗೆ ಕೀಳು ಮಟ್ಟದ ಮಾತುಗಳನ್ನಾಡಿ, ಅಧಿಕಾರಿಗಳಿಗೆ ಹೆದರಿಸುವಂತಹದ್ದು ನಡೆಯುವುದಿಲ್ಲ. ಅಧಿಕಾರಿಗಳು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ ಎಂದರು.
PublicNext
02/10/2022 12:07 pm