ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ, ತಮ್ಮ ಪುತ್ರನ ಒಡೆತನದ ಮ್ಯಾಗ್ನೆಟಿಕ್ ಫೋಟೋ ಕಂಪನಿಯ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು.
ಫ್ಯಾಕ್ಟರಿಯಲ್ಲಿನ ಯಂತ್ರಗಳಿಗೆ ಕುಟುಂಬ ಸಮೇತರಾಗಿ ಪೂಜೆ ನೆರವೇರಿಸಿದರು. ಈ ವೇಳೆ ಪತ್ನಿ ಚೆನ್ನಮ್ಮ, ಪುತ್ರ ಭರತ್, ಪುತ್ರಿ ಪೂಜೆಯಲ್ಲಿ ಪಾಲ್ಗೊಂಡರು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೂಡ ಸಿಎಂ ಜೊತೆ ಪೂಜೆಯಲ್ಲಿ ಭಾಗವಹಿಸಿದರು.
ಕಳೆದ ವರ್ಷವೂ ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿಗೆ ಬಂದು ಆಯುಧ ಪೂಜೆಯಲ್ಲಿ ಭಾಗವಹಿಸಿದ್ದರು. ಪೂಜೆಯ ನಂತರ ಕಂಪನಿಯ ಉದ್ಯೋಗಿಗಳಿಗೆ ಬೋನಸ್ ನೀಡಲಾಗಿತು.
Kshetra Samachara
03/10/2022 10:29 pm