ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 241ನೇ ದಿನಕ್ಕೆ ಕಾಲಿಟ್ಟ ವಾಲ್ಮೀಕಿ ಸಮುದಾಯ ಪ್ರತಿಭಟನೆ; ಸ್ವಾಮೀಜಿಗಳು ಭಾಗಿ

ಬೆಂಗಳೂರು: ಫ್ರೀಡಂ ಪಾರ್ಕ್‌ ನಲ್ಲಿ ಕಳೆದ 241 ದಿನಗಳಿಂದ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ ನಡೆಯುತ್ತಿದೆ.

ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ವರದಿ ಜಾರಿಗೊಳಿಸಲು ಕೋರಿ ಪ್ರತಿಭಟನೆ ನಡೆಸಲಾಗ್ತಿದ್ದು, ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ.

ಇಂದಿನ ಪ್ರತಿಭಟನೆಯಲ್ಲಿ ಹರಿಹರ ಪೀಠದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಭೋವಿ ಪೀಠದ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಹಾಗೂ ಮುಖಂಡರು ಭಾಗಿಯಾಗಿದ್ದಾರೆ.

Edited By : Manjunath H D
PublicNext

PublicNext

08/10/2022 04:47 pm

Cinque Terre

23.65 K

Cinque Terre

0

ಸಂಬಂಧಿತ ಸುದ್ದಿ