ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ತುಳಿತಕ್ಕೊಳಗಾದವರಿಗೆ ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧ; ಸಿಎಂ

ವಿಧಾನಸೌಧ: ತುಳಿತಕ್ಕೆ ಒಳಪಟ್ಟ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಆತ್ಮಗೌರವ, ಆತ್ಮಸನ್ಮಾನ ,ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಿವರ್ತನೆಯ ಹರಿಕಾರ, ಶ್ರೇಷ್ಠ ಮಾನವತಾವಾದಿ, ರಾಮಾಯಣದ ರಚನಕಾರ, ಇಡೀ ಜಗತ್ತಿಗೆ ದಾರಿದೀಪವಾಗಿರುವ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅತ್ಯಂತ ವಿಜ್ರೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ.

ಸರ್ಕಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲು ತೀರ್ಮಾನ ಮಾಡಿದ್ದು, ಗುಲ್ಬರ್ಗಾದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಂದು ಸ್ಮರಿಸಿದ ಸಿಎಂ, ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಚಿವರಾದ ಶ್ರೀರಾಮುಲು, ಗೋವಿಂದ ಕಾರಜೋಳ ಹಾಗೂ ನಾನು ಕೂಡ ಭಾಗವಹಿಸಿದ್ದ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.

ಅಂದಿನಿಂದ ಇಂದಿನವರೆಗೂ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಾಡಿನಾದ್ಯಂತ ಅರ್ಥಪೂರ್ಣವಾಗಿ ಆಚರಿದಲಾಗುತ್ತಿದೆ. ಮಹರ್ಷಿ ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ಸರ್ಕಾರ, ಸಮಾಜ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಲು ಅಗತ್ಯವಿರುವ ಕಾರ್ಯಕ್ರಮಗಳನ್ನು ನಾವು ರೂಪಿಸುತ್ತಿದ್ದೇವೆ ಎಂದು ತಿಳಿಸಿದರು.

Edited By : Nagesh Gaonkar
PublicNext

PublicNext

09/10/2022 04:29 pm

Cinque Terre

44.31 K

Cinque Terre

0

ಸಂಬಂಧಿತ ಸುದ್ದಿ