ಬೆಂಗಳೂರು: ಹಿಂದಿ ಹೇರಿಕೆ ವಿರೋಧಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಅಕ್ಟೋಬರ್ 15 ರಂದು ಬೃಹತ್ ಪ್ರತಿಭಟನೆ ನಡೆಯಲಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಸರ್ಕಾರದ ಭಾಷಾ ಸಮಾನತೆಯನ್ನು ಧಿಕ್ಕರಿಸುತ್ತೇವೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಕರುನಾಡಿನಲ್ಲಿ ಯಾವುದೇ ದೊಣ್ಣೆ ನಾಯಕನ ಅಪ್ಪಣೆ ಬೇಕಾಗಿಲ್ಲ. ಕನ್ನಡಕ್ಕೆ ಮಲತಾಯಿ ಧೋರಣೆಯನ್ನು ತೋರಿದರೆ ನಾವು ಸಹಿಸುವುದಿಲ್ಲ. ಹೀಗಾಗಿ ಅಕ್ಟೋಬರ್ 15 ರಂದು ಹಿಂದಿ ಹೇರಿಕೆ ವಿರುದ್ಧ ಧರಣಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
PublicNext
10/10/2022 04:41 pm