ಕೊರಟಗೆರೆ : ಮಾಜಿ ಡಿಸಿಎಂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಜಿ.ಪರ ಮೇಶ್ವರ್'ರವರು
ಕೊರಟಗೆರೆಯ ತಾಲ್ಲೂಕಿನ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ವಿಧಾನಸಭಾ ಅಧಿವೇಶನ ಕಾರ್ಯ ಕಲಾಪಗಳನ್ನು ವೀಕ್ಷಿಸಲು ಅವಕಾಶ ನೀಡಿ ಗುರುವಾರ ಕಾರ್ಯ ಕಲಾಪಗಳು ಹೇಗೆ ನಡೆಯುತ್ತವೆ ಎಂದು ವಿದ್ಯಾರ್ಥಿಗಳು ತಿಳಿದುಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದ್ದರು.
ಕಲಾಪದ ನಂತರ ವಿದ್ಯಾರ್ಥಿಗಳೊಡನೆ ವಿಧಾನಸೌಧದ ಮುಂದೆ ಆತ್ಮೀಯತೆಯಿಂದ ವಿದ್ಯಾರ್ಥಿಗಳೊಡನೆ ಕಲಾಪದ ಅನುಭವದ ಬಗ್ಗೆ ಮಾಹಿತಿ ಪಡೆದು ವಿದ್ಯಾರ್ಥಿಗಳ ಜೊತೆ ಭಾವಚಿತ್ರವನ್ನು ತೆಗೆಸಿಕೊಂಡು ನಂತರ ವಿದ್ಯಾರ್ಥಿಗಳಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಿ ಕಾಲೇಜಿನ ವಿದ್ಯಾರ್ಥಿಗಳ ಬಹುದಿನದ ಕನಸನ್ನು ನನಸುಗೊಳಿಸಿದ ಶಾಸಕರಿಗೆ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದು ಪರಮೇಶ್ವರ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ವರದಿ:- ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್ ತುಮಕೂರು.
PublicNext
16/09/2022 03:30 pm