ಬೆಂಗಳೂರು : ಕಳೆದ 10 ತಿಂಗಳುಗಳಿಂದ ಸ್ಥಗಿತಗೊಂಡಿರುವ ಬೀದರ್ ನಾಗರೀಕ ವಿಮಾನಯಾನ ಸೇವೆಯನ್ನು ಪುನಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಭೆಯ ಬಳಿಕ ವಿವರ ನೀಡಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಬ್ಸಿಡಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ವಿಮಾನ ಯಾನ ಸೇವೆ ಸ್ಥಗಿತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಸಬ್ಸಿಡಿ ನೀಡಿ ಕರುನಾಡ ಕಿರೀಟ ಬೀದರ್ ಗೆ ವಾಯುಯಾನ ಕಲ್ಪಿಸಲು ನಿರ್ಧರಿಸಿದೆ ಎಂದರು.
ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವ ಸಬ್ಸಿಡಿ ಹಣದ ಪೈಕಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಶೇ. 70ರಷ್ಟು ಮತ್ತು ರಾಜ್ಯ ಸರ್ಕಾರ ಶೇ.30 ಭರಿಸಲಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ವಿಮಾನಯಾನ ಸೇವೆ ಪುನಾರಂಭವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
PublicNext
28/10/2024 09:34 pm