ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾಳೆ ಮಧ್ಯಾಹ್ನ 3 ಗಂಟೆಗೆ ಬಿಬಿಎಂಪಿ ಬಜೆಟ್ ಮಂಡನೆ..?

ಬೆಂಗಳೂರು: ಬಿಬಿಎಂಪಿ ಬಜೆಟ್​ ಮಂಡನೆ ಯಾವಾಗ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಪಾಲಿಕೆಯ ವಿಶೇಷ ಆಯುಕ್ತರು ಬಜೆಟ್ ಮಂಡನೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಆಯುಕ್ತರು ರಾಜಧಾನಿಯ ಅಭಿವೃದ್ಧಿಯ ಆಯವ್ಯಯಗಳ ಪಟ್ಟಿ ಮಂಡಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರ್ತಿದೆ.

ಬೆಂಗಳೂರು ಮಹಾನಗರ ಉಸ್ತುವಾರಿಯೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‍ಗೆ ಒಪ್ಪಿಗೆ ಸೂಚಿಸಿದ್ದು, 2022-23ನೇ ಸಾಲಿನ ಬಜೆಟ್‌ಗೆ ಬಿಬಿಎಂಪಿ ಅಗತ್ಯ ತಯಾರಿ ಮಾಡಿಕೊಂಡಿದೆ. ಬಜೆಟ್ ಅನ್ನು ಮಲ್ಲೇಶ್ವರಂನಲ್ಲಿರುವ ಐಪಿಪಿ ಸೆಂಟರ್‌ನಲ್ಲಿ ಮಂಡಿಸಲು ತಯಾರಿ ನಡೆದಿದೆ. ಜನಪ್ರತಿನಿಧಿಗಳಿಲ್ಲದೆ ಎರಡನೇ ಬಾರಿ ಪಾಲಿಕೆಯ ಆಡಳಿತಾಧಿಕಾರಿ ನೇತೃತ್ವದಲ್ಲಿ ಬಜೆಟ್ ಮಂಡನೆಯಾಗುತ್ತಿದೆ ಎನ್ನಲಾಗಿದೆ.

ಕಳೆದ ವರ್ಷದಂತೆ ಈ ವರ್ಷವೂ ಪೇಪರ್‌ರಹಿತ ಬಜೆಟ್ ಮಂಡನೆಯಾಗಲಿದೆ. ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಬಜೆಟ್ ಮಂಡಿಸುವರು. 9 ಸಾವಿರ ಕೋಟಿ ರೂ.ಗೆ ಮೀರದಂತೆ ವಾಸ್ತವಿಕ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಪ್ರಗತಿಯಲ್ಲಿರುವ ಹಾಗೂ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡುವುದು. ಆಸ್ತಿ ತೆರಿಗೆ ಸಂಗ್ರಹ ಗುರಿ ಐದು ಸಾವಿರ ಕೋಟಿ ರೂ.ಗೆ ಹೆಚ್ಚಳ ಮಾಡುವ ಚಿಂತನೆ ಇದೆ.

Edited By : Nagaraj Tulugeri
PublicNext

PublicNext

29/03/2022 07:44 pm

Cinque Terre

13.53 K

Cinque Terre

0

ಸಂಬಂಧಿತ ಸುದ್ದಿ