ಬೆಂಗಳೂರು: ಕೃತಕ ಪ್ಲಾಸ್ಟಿಕ್ ಹೂವಿನ ಹಾವಳಿಯನ್ನು ತಪ್ಪಿಸುವಂತೆ ಒತ್ತಾಯಿಸಿ ಇಂದು ಆನೇಕಲ್ ತಾಲ್ಲೂಕು ಹಸಿರು ಮನೆ ಬೆಳೆಗಾರರ ಸಂಘದ ವತಿಯಿಂದ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ..
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಸಿರು ಮನೆ ನಿರ್ಮಾಣ ಮಾಡಲು ಸಹಾಯಧನವನ್ನು ನೀಡುತ್ತಿದ್ದಾರೆ. ರೈತರು ಬ್ಯಾಂಕ್‌ಗಳಲ್ಲಿ ಕೋಟಿಗಟ್ಟಲೆ ಸಾಲ ಮಾಡಿ ಹಸಿರು ಮನೆ ನಿರ್ಮಾಣ ಮಾಡುತ್ತಿದ್ದಾರೆ.. ಆದರೆ ಕೃತಕ ಪ್ಲಾಸ್ಟಿಕ್ ಹೂವಿನ ಹಾವಳಿಯಿಂದ ತಾಜಾ ಹೂವು ಗಳನ್ನು ಮಾರಾಟ ಮಾಡಲು ಪರದಾಡುತ್ತಿದ್ದಾರೆ ಇದರಿಂದ ಆರ್ಥಿಕವಾಗಿ ಬಹಳಷ್ಟು ರೈತರು ನಷ್ಟ ಅನುಭವಿಸುತ್ತಿದ್ದಾರೆ ಜೊತೆಗೆ ಸಾಲದ ಸುಳಿಗೆ ಸಿಲುಕಿದ್ದಾರೆ.. ಹೀಗಾಗಿ ಪ್ಲಾಸ್ಟಿಕ್ ಹೂವಿನ ಬಳಕೆಯನ್ನು ಸರ್ಕಾರ ಸಂಪೂರ್ಣವಾಗಿ ನಿಷೇಧ ಮಾಡಬೇಕು ಎಂದು ಹಸಿರುಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
PublicNext
28/05/2022 10:57 pm