ದೊಡ್ಡಬಳ್ಳಾಪುರ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಕಾಣಿಕೆಯ ಹುಂಡಿ ಹಣ ಎಣಿಕೆ ಕಾರ್ಯ ಮಾಡಲಾಗಿದ್ದು.
ಹುಂಡಿಯಲ್ಲಿ ಒಟ್ಟು 77.26.172 ರೂಪಾಯಿ ನಗದು, 9 ಗ್ರಾಂ ಚಿನ್ನ ಹಾಗೂ 3 ಕೆ.ಜಿ. ಬೆಳ್ಳಿ ಸಂಗ್ರಹಗೊಂಡಿದೆ.
ಕಳೆದ ಎರಡು ತಿಂಗಳಿಂದ ಹುಂಡಿ ಹಣ ಎಣಿಕೆ ಮಾಡಿರಲಿಲ್ಲ, ಇಂದು ಭಕ್ತರ ಸಮ್ಮುಖದಲ್ಲಿ ಎಣಿಕೆ ಕಾರ್ಯ ಮಾಡಲಾಯಿತು. ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಸತೀಶ್, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜು, ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಹೇಮಾವತಿ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ, ಪ್ರಧಾನ ಅರ್ಚಕರಾದ ಸುಬ್ಬಕೃಷ್ಣ ಶಾಸ್ತ್ರಿ ನೇತೃತ್ವದಲ್ಲಿ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ದೇವಾಲಯದ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
Kshetra Samachara
21/06/2022 02:03 pm