ರಿಪೋರ್ಟ್- ರಂಜಿತಾಸುನಿಲ್.
ಬೆಂಗಳೂರು : ‘ದ ಸೋಕ್ ಮಾರ್ಕೆಟ್' ಶೀರ್ಷಿಕೆಯಡಿ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಹತ್ತು ದಿನಗಳ ಕಾಲ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಮೇಳವನ್ನು ನಟಿಯರಾದ ಭೂಮಿ ಶೆಟ್ಟಿ ಮತ್ತು ವಿದ್ಯಾಶ್ರೀ ಇಂದು ಚಾಲನೆ ನೀಡಿದರು.
10 ದಿನಗಳ ಕಾಲ ನಡೆಯಲಿರುವ ಮೇಳದಲ್ಲಿ ನಾನಾ ತರಹದ ಕಲೆ, ಶಿಲ್ಪಕಲಾ ಕೃತಿಗಳು, ಆಭರಣಗಳು ಹೀಗೆ ಹಬ್ಬದ ವಾತಾವರಣವೇ ಇದೆ. ಮನೆಗೆ ಬೇಕಾದ ಎಲ್ಲಾ ಬಗೆಯ ಅಲಂಕಾರಿಕ ವಸ್ತುಗಳು ಸಿಗಲಿವೆ.
80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೆ ಇಷ್ಟವಾಗುವ ಹ್ಯಾಂಡ್ ಲೂಮ್ ಸ್ಯಾರಿ, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.
PublicNext
17/06/2022 10:22 pm