ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕರಕುಶಲ ಕರ್ಮಿಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ, ಮಾರಾಟ

ಬೆಂಗಳೂರು: ಬೆಂಗಳೂರು ದಕ್ಷಿಣ ಭಾಗದ ಕಲಾಸಕ್ತರಿಗೆ ದೇಶದ ವಿವಿಧ ಭಾಗಗಳ 50ಕ್ಕೂ ಹೆಚ್ಚು ಕರಕುಶಲ ಕರ್ಮಿಗಳು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟ ಮೇಳವಾದ ಇಂಡಿಯನ್ ಹಾತ್ ಫೆಸ್ಟಿವಲ್‌ಗೆ ಚಿತ್ರನಟಿ ಮತ್ತು ರೂಪದರ್ಶಿ ಚೈತ್ರಾ ವಾಸುದೇವನ್ ಚಾಲನೆ ನೀಡಿದರು.

ಹೆಚ್ಎಸ್ಆರ್ ಲೆಔಟ್‌ನ ವೈಟ್ ಹೌಸ್ ಕನ್ವೆಕ್ಷನ್ ಸೆಂಟರ್‌ನಲ್ಲಿ ಜೂನ್ 29ರಿಂದ ಇಂಡಿಯನ್ ಹಾತ್ ಫೆಸ್ಟಿವಲ್ ಆರಂಭವಾಗಿದ್ದು, ಜುಲೈ 3 ರವರೆಗೆ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯುತ್ತಿದ್ದು, ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದೆ.

ಈ ಮೇಳದಲ್ಲಿ 75ಕ್ಕೂ ಹೆಚ್ಚು ಮಳಿಗೆಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನ ಮಾಡುತ್ತಿದ್ದಾರೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೆ ಒಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿದೆ. ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ.

ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.

Edited By : Nagesh Gaonkar
PublicNext

PublicNext

29/06/2022 09:58 pm

Cinque Terre

53.25 K

Cinque Terre

0

ಸಂಬಂಧಿತ ಸುದ್ದಿ