ಬೆಂಗಳೂರು: ಇತ್ತೀಚಿಗೆ ಶಾಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ಉದಾಹರಣೆಯೆಂಬಂತೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ 2 ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.
ಆನೇಕಲ್ ತಾಲೂಕಿನ ದೊಮ್ಮಸಂದ್ರದ ಸರಸ್ವತಿ ವಿದ್ಯಾನಿಕೇತನ ಶಾಲೆಯಲ್ಲಿ ಹಾಗೂ ಹಾರಗದ್ದೆ ಗ್ರಾಮದ ಸರ್ಕಾರಿ ಶಾಲೆಯಲ್ಲೂ ಸಹ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ದೊಮ್ಮಸಂದ್ರದ ಸರಸ್ವತಿ ವಿದ್ಯಾನಿಕೇತನ ಶಾಲೆಯಲ್ಲಿ ಐದು ಮಂದಿ ವಿದ್ಯಾರ್ಥಿಗಳಿಗೆ ಪಾಸಿಟಿವ್ ಆಗಿದ್ದು ಸರಕಾರಿ ಶಾಲೆಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ವಿದ್ಯಾರ್ಥಿಗಳ ಸಂಪರ್ಕಿತ ಮಾಹಿತಿಯನ್ನು ಆರೋಗ್ಯಾಧಿಕಾರಿಗಳು ಹಾಕುತ್ತಿದ್ದು, ಎಲ್ಲರನ್ನೂ ಸಹ ಈಗ ಕ್ವಾರೆಂಟೈನ್ ಮಾಡಲಾಗಿದೆ.
ಸಾವಿರಾರು ವಿದ್ಯಾರ್ಥಿಗಳು ಸರಸ್ವತಿ ವಿದ್ಯಾನಿಕೇತನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇನ್ನಷ್ಟು ವಿದ್ಯಾರ್ಥಿಗಳಿಗೆ ಪಾಸಿಟಿವ್ ಆಗುವ ಸಾಧ್ಯತೆಯಿದೆ. ಆರೋಗ್ಯಾಧಿಕಾರಿಗಳು ಇದೀಗ ಎಲ್ಲಾ ವಿದ್ಯಾರ್ಥಿಗಳಿಗೂ ಸಹ ಕೋವಿಡ್ ಟೆಸ್ಟನ್ನು ಮಾಡುತ್ತಿದ್ದಾರೆ.
Kshetra Samachara
16/12/2021 10:19 pm