ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಬಿಎಂಪಿ ವಾರ್ಡ್‌ಗೆ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ ನಾಮಕರಣಕ್ಕೆ ಒತ್ತಾಯ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೂತನವಾಗಿ ಮರು ವಿಂಗಡಣೆ ಮಾಡಿರುವ ವಾರ್ಡ್ ಒಂದಕ್ಕೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರ ಹೆಸರನ್ನು ಇಡಬೇಕು ಎಂದು ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕಿ ಭಾಗ್ಯವತಿ ಅಮರೇಶ್ ಅವರು ಮನವಿ ಮಾಡಿದ್ದಾರೆ.

ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪುನೀತ್ ರಾಜ್‌ಕುಮಾರ್ ಅವರು ಸಮಾಜಕ್ಕೆ ಮತ್ತು ಚಿತ್ರರಂಗಕ್ಕೆ ಮಾದರಿಯಾಗಿದ್ದರು. ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆ 198 ರಿಂದ 243ಕ್ಕೆ ಮರು ವಿಂಗಡಣೆಯಾದ ನಂತರ ಕೆಲವು ವಾರ್ಡ್‌ಗಳಿಗೆ ನಾಮಕರಣ ಮಾಡುವಾಗ ಯಾವುದಾದರು ಒಂದು ವಾರ್ಡ್‌ಗೆ ಅಥವಾ ಪುನೀತ್ ರಾಜ್‌ಕುಮಾರ್ ಅವರು ವಾಸವಿದ್ದ ಮನೆಯ ವಾರ್ಡ್‌ಗೆ ಅವರ ಹೆಸರನ್ನು ಇಟ್ಟು ಶಾಶ್ವತವಾಗಿ ಅವರ ಹೆಸರು ಉಳಿಯುವಂತೆ ಮಾಡಬೇಕಿದೆ. ಒಂದು ಬೀದಿಗೆ, ಒಂದು ವೃತ್ತಕ್ಕೆ ಅಥವಾ ರಸ್ತೆಗೆ ಅವರ ಹೆಸರುನ್ನು ಇಡುವುದಕ್ಕಿಂತ ಸಂಪೂರ್ಣ ಒಂದು ವಾರ್ಡ್‌ಗೆ ಅವರ ಹೆಸರನ್ನು ಇಟ್ಟರೆ ಒಳ್ಳೆಯದೆಂದು ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಯಾಗಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರಿಗೆ ಭಾಗ್ಯವತಿ ಅಮರೇಶ್ ಮನವಿ ಮಾಡಿಕೊಂಡಿದ್ದಾರೆ.

Edited By : Vijay Kumar
PublicNext

PublicNext

07/06/2022 10:17 am

Cinque Terre

18 K

Cinque Terre

0

ಸಂಬಂಧಿತ ಸುದ್ದಿ