ಸದಾಶಿವನಗರ: ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಅಂಗವಾಗಿ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತನಾಗ್ ಅವರು ಕ್ಷೇತ್ರದ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರ ಜತೆಗೂಡಿ ಸದಾಶಿವ ನಗರದ ಪೂಜಾರಿ ಲೇಔಟ್‌ನಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾದರು.
ಬಳಿಕ ಮಾತನಾಡಿದ ಅನಂತನಾಗ್ , "ಮೋದಿಯವರು ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವವು ದೇಶಕ್ಕೆ ಹೊಸ ಚೈತನ್ಯ ತಂದಿದೆ. ಭಗವಂತನು ಅವರಿಗೆ ಆಯುರಾರೋಗ್ಯ ಕೊಟ್ಟು ಕಾಪಾಡಲಿ" ಎಂದು ಹಾರೈಸಿದರು.
ಅಶ್ವತ್ಥ ನಾರಾಯಣ ಅವರು ಮಲ್ಲೇಶ್ವರಂ ಕ್ಷೇತ್ರದ ಶಾಸಕರಾಗಿ ನಿರಂತರ ಮೂರು ಅವಧಿಯಿಂದ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರವನ್ನು ಇವರು ಮಾದರಿ ರೀತಿಯಲ್ಲಿ ಅಭಿವೃದ್ಧಿ ಪಡಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
PublicNext
17/09/2022 03:28 pm