ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಸಮಾಧಿ ವೀಕ್ಷಣೆಗೆ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಅವಕಾಶ ನೀಡಲಾಗಿದೆ. ಸಾರ್ವಜನಿಕರಿಗೆ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ನೂರಾರು ಜನ ಪುನೀತ್ ಸಮಾಧಿ ಸ್ಥಳಕ್ಕೆ ಬಂದು ಕಂಬನಿ ಮಿಡಿಯುತ್ತಿದ್ದಾರೆ.
ಜನರನ್ನು ನಿಯಂತ್ರಿಸಲು ಸಮಾಧಿ ಸ್ಥಳದ ಸುತ್ತ ಪೊಲೀಸರು, RAF ಸಿಬ್ಬಂದಿ ನಿಯೋಜಿಸಲಾಗಿದೆ. ಹಾಗೂ ಸಮಾಧಿ ಸುತ್ತ ಬ್ಯಾರಿಕೇಡ್ ಅಳವಡಿಸಲಾಗಿದೆ. ಸರದಿ ಸಾಲಿನಲ್ಲಿ ಬರುತ್ತಿರುವ ಸಾರ್ವಜನಿಕರು ಪುನೀತ್ ಸಮಾಧಿ ವೀಕ್ಷಿಸುತ್ತಿದ್ದಾರೆ.
Kshetra Samachara
03/11/2021 02:06 pm