ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ನಿವಾಸದಲ್ಲಿ ಭೇಟಿಯಾದರು.
ರಾಜ್ಯದಲ್ಲಿ ದಿ ಕಾಶ್ಮೀರ ಫೈಲ್ಸ್ ಚಲನಚಿತ್ರಕ್ಕೆ ಶೇಕಡಾ 100ರಷ್ಟು ತೆರಿಗೆ ವಿನಾಯತಿ ಘೋಷಣೆ ಮಾಡಿದ ಮುಖ್ಯಮಂತ್ರಿಗಳ ಕ್ರಮಕ್ಕೆ ನಿರ್ಮಾಪಕ ಅಭಿಷೇಕ ಅವರು ಧನ್ಯವಾದ ಅರ್ಪಿಸಿದರು. ಈ ಸಂದರ್ಭದಲ್ಲಿ ಚಲನ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಜೊತೆ ದೂರವಾಣಿಯಲ್ಲಿ ಸಿ.ಎಂ. ಮಾತನಾಡಿದರು. ಚಲನಚಿತ್ರದ ಬಗ್ಗೆ ಸಿ.ಎಂ.ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.
Kshetra Samachara
30/03/2022 10:55 am