ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್: ಎತ್ತಿನ ಬಂಡಿಯಲ್ಲಿ ಅಪ್ಪು ಭಾವಚಿತ್ರ ಮೆರವಣಿಗೆ

ಆನೇಕಲ್‌: ಮುತ್ಯಾಲಮ್ಮ ಕರಗ ಜಾತ್ರಾ ಮಹೋತ್ಸವದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರವನ್ನಿಟ್ಟು ಮೆರವಣಿಗೆ ಮಾಡುವುದರ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು.

ಆನೇಕಲ್ ತಾಲೂಕಿನ ಮಾಯಸಂದ್ರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳೇ ಹಳ್ಳಿಯ ಪ್ರಮುಖ ಬೀದಿಗಳಲ್ಲಿ ಹಳ್ಳಿಕಾರು ಹೋರಿಗಳನ್ನು ಕಟ್ಟಿ ಎತ್ತಿನ ಬಂಡಿಯಲ್ಲಿ ಪುನೀತ್ ರಾಜ್‌ಕುಮಾರ್ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡಲಾಯಿತು. ಹಳೇ ಹಳ್ಳಿ ಗ್ರಾಮದ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ತಂಡದಿಂದ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಊರಿನ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Edited By : Shivu K
PublicNext

PublicNext

20/04/2022 11:03 am

Cinque Terre

42.87 K

Cinque Terre

1

ಸಂಬಂಧಿತ ಸುದ್ದಿ