ಕನ್ನಡದ ಹೆಸರಾಂತ ನಟ ಅನಂತ್ ನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂವರು ಸಾಧಕರಿಗೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಿಸಿದೆ.
ಸಿನಿಮಾ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಅನಂತ್ ನಾಗ್, ಹೆಸರಾಂತ ಶಹನಾಯಿ ವಾದಕ ಬಿಸ್ಮಿಲ್ಲಾ ಖಾನ್ ಶಿಷ್ಯರಾದ ಎಸ್. ಬಲ್ಲೇಶ್ ಭಜಂತ್ರಿ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿರುವ ಶರತ್ ಶರ್ಮಾ ಈ ಸಾಲಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ನಿರಂಜನ ವಾನಳ್ಳಿ ತಿಳಿಸಿದ್ದಾರೆ.
Kshetra Samachara
14/07/2022 08:14 pm