ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ರಸ್ತೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿವೆ.
ಬೆಂಗಳೂರಿನಿಂದ ಯಲಹಂಕ ಮಾರ್ಗವಾಗಿ ಏರ್ಪೋರ್ಟ್ ಕಡೆ ತೆರಳುತ್ತಿದ್ದ ಬಿಳಿ ಬಣ್ಣದ ಲ್ಯಾನ್ಸರ್ ಕಾರು, ಏರ್ಪೋರ್ಟ್ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಮತ್ತೊಂದು ವೋಕ್ಸ್ ವ್ಯಾಗನ್ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವೇಗವಾಗಿದ್ದ ಲ್ಯಾನ್ಸರ್ ಕಾರು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಡಿವೈಡರ್ ದಾಟಿ ಪಕ್ಕದ ರಸ್ತೆಗೆ ನೆಗೆದು ಪೋಕ್ಸ್ ವ್ಯಾಗನ್ ಕಾರಿಗೆ ಡಿಕ್ಕಿ ಹೊಡೆದಿದೆ. ಎರಡೂ ಕಾರುಗಳು ನಜ್ಜುಗುಜ್ಜಾಗಿವೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.
Kshetra Samachara
28/11/2021 09:57 am