ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ- ಕಾರು ಹರಿದು ಇಬ್ಬರು ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಬಲಿಯಾದ ಘಟನೆ ನಗರದ ನೈಸ್ ರಸ್ತೆಯಲ್ಲಿ ನಡೆದಿದೆ.

ಬಿಂದು (28)ಹಾಗೂ ಗಾಳಿ ಹೊನ್ನಮ್ಮ (68) ಮೃತ ದುರ್ದೈವಿಗಳು. ಈ ದುರ್ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ಹೊಸಕೆರೆಹಳ್ಳಿಯ ನೈಸ್ ರೋಡ್ ಜಂಕ್ಷನ್ ಬಳಿ ಬಿಂದು ಹಾಗೂ ಗಾಳಿ ಹೊನ್ನಮ್ಮ ಅವರು ರಾಗಿಯನ್ನು ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ವೆಗವಾಗಿ ಬಂದ ಚೆವ್ರೊಲೆಟ್ ಕಾರು ಬಿಂದು, ಹೊನ್ನಮ್ಮ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.

Edited By : Vijay Kumar
Kshetra Samachara

Kshetra Samachara

01/12/2021 10:35 pm

Cinque Terre

464

Cinque Terre

0

ಸಂಬಂಧಿತ ಸುದ್ದಿ