ಬೆಂಗಳೂರು: ಬಿಬಿಎಂಪಿ ಜಂಟಿ ಆಯುಕ್ತ ನಾಗರಾಜ್ ಕಾರಿನ ಚಾಲಕ ಕುಡಿದ ನಶೆಯಲ್ಲಿ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಇನ್ನು ಚಾಲಕ ಶಿವಕುಮಾರ್ ಎಂಬಾತ ನಿನ್ನೆ (ರವಿವಾರ) ಕೆಲಸ ಮುಗಿಸಿಕೊಂಡು ಎಣ್ಣೆ ಹೊಡೆದು ಆರ್.ಆರ್. ನಗರದಲ್ಲಿರುವ ಮನೆಗೆ ಹೋಗುವಾಗ ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದಲ್ಲಿ ಕಾರಿನ ಮುಂಭಾಗಗಕ್ಕೆ ಹಾನಿಯಾಗಿದೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಚಾಲಕ ಶಿವಕುಮಾರ್ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಪಾಸಣೆ ವೇಳೆ ಚಾಲಕ ಮದ್ಯ ಸೇವನೆ ಮಾಡಿರುವುದು ಖಚಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
16/08/2022 04:03 pm