ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿರ್ಮಾಪಕರ ಕೊಲೆಗೆ ಸಂಚು ಮತ್ತಿಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು : ಸಿನಿಮಾ ನಿರ್ಮಾಪಕ ಉಮಾಪತಿ ಕೊಲೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹೌದು ರಾಬರ್ಟ್, ಹೆಬ್ಬುಲಿ, ಮದಗಜ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಕೊಲೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಜಯನಗರ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಕರಿಯ ರಾಜೇಶ್ ಸೇರಿದಂತೆ ಹಲವರನ್ನ ಜಯನಗರ ಪೊಲೀಸರು ಬಂಧಿಸಿದ್ದರು. ಸದ್ಯ ನಿನ್ನೆ ಸುಂಕದಕಟ್ಟೆಯ ಬಾರ್ ಒಂದರಲ್ಲಿ ತಲೆ ಮರೆಸಿಕೊಂಡಿದ್ದ ದರ್ಶನ್ ಹಾಗೂ ಸಂಜಯ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

23/01/2022 03:39 pm

Cinque Terre

806

Cinque Terre

0

ಸಂಬಂಧಿತ ಸುದ್ದಿ