ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕ್ಷೇತ್ರ ಶಿಕ್ಷಣಾಧಾಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಯಲಹಂಕ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಕಮಲಾಕರ್ ಎಂಬಾತರೇ ಆತ್ಮಹತ್ಯೆಗೆ ಶರಣಾದವರು. ಕೊಡಿಗೆಹಳ್ಳಿಯ ಎನ್‌ಟಿಐ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡ ಬಿಇಓ ಕಮಲಾಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ಈ ನಿರ್ಧಾರಕ್ಕೆ ಬಹುದಿನಗಳ ಅನಾರೋಗ್ಯವೇ ಕಾರಣ ಎನ್ನಲಾಗಿದೆ. ಈ ಬಗ್ಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
26/12/2021 05:20 pm