ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಪ್ರತಿಷ್ಠಿತ ಅಲಯನ್ಸ್ ಕಾಲೇಜಿನ ಕೆಲ ವಿದ್ಯಾರ್ಥಿಗಳು
ಓವರ್ ಹೆಡ್ ಟ್ಯಾಂಕ್ ಮೇಲೆ ಹತ್ತಿ ಮೋಜು ಮಸ್ತಿ ಮಾಡಿದ್ದಲ್ಲದೆ ಪುಂಡಾಟ ಮೆರೆದಿದ್ದಾರೆ.
ಆನೇಕಲ್ ಪಟ್ಟಣದ ಕಾವಲಹೊಸಹಳ್ಳಿ ಬಳಿ ಇರುವ ಅಲಯನ್ಸ್ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಪ್ರತಿದಿನ ಓವರ್ ಹೆಡ್ ಟ್ಯಾಂಕ್ ಮೇಲೆ ಹತ್ತಿ ಪ್ರಾಣದ ಜೊತೆ ಚೆಲ್ಲಾಟ ಆಡುತಿದ್ದಾರೆ. ಇನ್ನು ಕಾಲೇಜಿನ ವಿದ್ಯಾರ್ಥಿಗಳ ಪುಂಡಾಟಕ್ಕೆ ಕಡಿವಾಣ ಹಾಕಲು ಕಾಲೇಜು ಆಡಳಿತ ಮಂಡಳಿ ಮುಂದಾಗಬೇಕಿದೆ. ಕಾಲೇಜಿನ ವಿರುದ್ಧ
ಗಾಂಜಾ, ಮದ್ಯಸೇವನೆ ರಸ್ತೆ ಅಪಘಾತ ಹೈಸ್ಪಿಡ್ ಚಾಲನೆ ಸೇರಿದಂತೆ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ
ಇದೀಗ ಓವರ್ ಹೆಡ್ ಟ್ಯಾಂಕ್ ಮೇಲೆ ಎಣ್ಣೆ ಪಾರ್ಟಿ ಮಾಡಿ ಕುಡಿದ ಮತ್ತಿನಲ್ಲಿ ಟ್ಯಾಂಕ್ ಮೇಲೆ ಓಡಾಟ ನಡೆಸುತ್ತಿದ್ದಾರೆ. ಸ್ವಲ್ಪ ಯಾಮಾರಿದ್ರು ಅಪಾಯ ಕಟ್ಟಿಟ್ಟ ಬುತ್ತಿ. ಇನ್ನಾದ್ರೂ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಪುಂಡಾಟಕ್ಕೆ ಬ್ರೇಕ್ ಹಾಕಬೇಕಿದೆ.
Kshetra Samachara
06/06/2022 06:21 pm