ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಾಂಬ್ ಬೆದರಿಕೆ ಕೇಸ್ ಗೆ ಟ್ವಿಸ್ಟ್: ಪರೀಕ್ಷೆ ಮುಂದೂಡಲು ಮೇಲ್ ಕಳುಹಿಸಿದ ಸ್ಟೂಡೆಂಟ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಡೆತನದ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಕಳುಹಿಸಿದ್ದ ಕಿಡಿಗೇಡಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ತನಿಖೆಯಿಂದ ಎಲ್ಲರೂ ಆಶ್ಚರ್ಯಪಡುವ ಸಂಗತಿ ಬಯಲಾಗಿದೆ. ಅದೇ ಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿ ಬೆದರಿಕೆ ಮೇಲ್ ಕಳುಹಿಸಿದ್ದ ಎಂಬುದು ಗೊತ್ತಾಗಿದೆ.

ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ಬಾಲಾಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಜುಲೈ 21 ರಂದು 10 ನೇ ತರಗತಿಯ ಮೊದಲ ಸೆಮಿಸ್ಟರ್ ಪರೀಕ್ಷೆ ಇತ್ತು. ಹೀಗಾಗಿ ಪರೀಕ್ಷೆ ಮುಂದೂಡಲು ವಿದ್ಯಾರ್ಥಿ ಪ್ಲ್ಯಾನ್ ಮಾಡಿ ಬಾಂಬ್ ಬೆದರಿಕೆಯ ಇ-ಮೇಲ್ ಕಳುಹಿಸಿದ್ದಾನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಆರ್. ಆರ್. ನಗರ ಪೊಲೀಸರು ಮೇಲ್ ಬಂದ ಐಪಿ ಅಡ್ರೆಸ್ ಜಾಡು ಹಿಡಿದು ವಿದ್ಯಾರ್ಥಿಯ ಕಿಡಿಗೇಡಿತನವನ್ನು ಪತ್ತೆ ಮಾಡಿದ್ದಾರೆ.ಆರೋಪಿ ಅಪ್ರಾಪ್ತನಾಗಿರುವ ಕಾರಣ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಹಾಗೂ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ‌ ಲಕ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ.

Edited By : Somashekar
PublicNext

PublicNext

19/07/2022 05:32 pm

Cinque Terre

31.07 K

Cinque Terre

0

ಸಂಬಂಧಿತ ಸುದ್ದಿ