ವರದಿ: ಗಣೇಶ್ ಹೆಗಡೆ
ಬೆಂಗಳೂರು: ಜಲ ಸಂಪನ್ಮೂಲ, ಬಿಬಿಎಂಪಿ, ಲೋಕೋಪಯೋಗಿ ಹೀಗೆ ರಾಜ್ಯದ ವಿವಿಧ ಪ್ರಾಧಿಕಾರದಿಂದ ಇನ್ನಿತರ ಸಿವಿಲ್ ಕಾಮಗಾರಿ ಪಡೆಯಲು ಗುತ್ತಿಗೆ ಮೊತ್ತದ ಶೇ. 40ರಷ್ಟು ಹಣವನ್ನು ಕಮಿಷನ್ ರೂಪದಲ್ಲಿ ನೀಡಲು ಬೇಡಿಕೆ ಇರಿಸಲಾಗುತ್ತಿದೆ ಎಂಬ ಗುತ್ತಿಗೆದಾರರ ಗಂಭೀರ ಆರೋಪಕ್ಕೆ ಪುಷ್ಟಿ ನೀಡುವಂತಹ ಮತ್ತೊಂದು ದೂರು ಸರಕಾರದ ಇಲಾಖೆ ವಿರುದ್ಧ ಕೇಳಿ ಬಂದಿದೆ.
ಎಸ್... ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೈಗಾರಿಕೆಗಳ ಪರವಾನಗಿಗಾಗಿ ಲಂಚ ಸ್ವೀಕರಿಸುತ್ತಿರುವ ಬಗ್ಗೆ ಕೈಗಾರಿಕೋದ್ಯಮಿಗಳು ದೂರಿದ್ದಾರೆ.
ಈ ಬಗ್ಗೆ ಪರಿಸರ, ಜೀವಶಾಸ್ತ್ರ ಹಾಗೂ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರಿಗೆ ನವೆಂಬರ್ 4ರಂದು ಪತ್ರ ಮುಖೇನ ಅಪಾದನೆ ಮಾಡಿದ್ದಾರೆ.
ಕೈಗಾರಿಕೆಗಳಿಗೆ ಪರವಾನಗಿ ನೀಡುವುದು ಹಾಗೂ ನವೀಕರಣಕ್ಕಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ವೇಳೆ ಲಂಚಕ್ಕಾಗಿ ಬೇಡಿಕೆ ಇಡುತ್ತಿರುವ ಬಗ್ಗೆ ದೂರಿನಲ್ಲಿ ಉಲ್ಲೇಖ ಆಗಿದೆ.
Kshetra Samachara
15/12/2021 05:21 pm