ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹರ್ಷ ಕುಟುಂಬಸ್ಥರಿಗೆ 25 ಲಕ್ಷ ಪರಿಹಾರ ನೀಡಿ : ಸಿಎಂಗೆ ಮುತಾಲಿಕ್ ಮನವಿ

ಬೆಂಗಳೂರು: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.

ಇನ್ನು ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಕ್ಕೆ ಅಭಿನಂದನೆ ತಿಳಿಸಿದ ಅವರು ಮೃತನ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಎಸ್ ಡಿಪಿಐ, ಪಿಎಫ್ ಐ ಹಾಗೂ ಸಿಎಫ್ ಐ ಸಂಘಟನೆಗಳಿಂದ ಎರಡು ವರ್ಷಗಳಿಂದ ಮೃತ ಹರ್ಷನಿಗೆ ಜೀವ ಬೆದರಿಕೆ ಹಾಕಿದ್ದರು, ಸರ್ಕಾರ ರಕ್ಷಣೆ ನೀಡದಿರುವುದು ನಾಚಿಗೇಡು ಸಂಗತಿಯಾಗಿದೆ.

ಈ ಹಿಂದೆ ವಿರೋಧ ಪಕ್ಷದಲ್ಲಿದ್ದ ಬಿಜೆಪಿಯು ರಾಜ್ಯದಲ್ಲಿ ಎಸ್ ಡಿಪಿಐ ಹಾಗೂ ಪಿಎಫ್ ಐ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿತ್ತು. ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಇಂತಹ ಸಂಘಟನೆಗಳನ್ನ ನಿಷೇಧಿಸಬೇಕು. ಹಿಂದೂ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಎಸ್ ಡಿಪಿಐ, ಪಿಎಫ್ ಐ ಹಾಗೂ ಸಿಎಫ್ ಐ ಬ್ಯಾನ್ ಮಾಡಬೇಕು.ಈ ಸಂಘಟನೆಗಳ ಬ್ಯಾನ್ ಗೆ ಕೇಂದ್ರಕ್ಕೆ ಹೇಳಬೇಕು

ಭಯೋತ್ಪಾದನಾ ಚಟುವಟಿಕೆ ನಡೆಸೋರನ್ನ ಮಟ್ಟಹಾಕಬೇಕು ಎನ್ನುತ್ತಿದ್ದಂತೆ ಸಿಎಂ ಪರಿಶೀಲನೆ ನಡೆಸೋದಾಗಿ ಹೇಳಿದ್ದಾರೆ.

Edited By : Manjunath H D
PublicNext

PublicNext

21/02/2022 05:37 pm

Cinque Terre

49.91 K

Cinque Terre

9