ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪ್ರತಿಷ್ಠಿತ ಅಲಯನ್ಸ್ ಕಾಲೇಜು ವಿರುದ್ಧ ದೂರು: ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ವಕೀಲ ಪುರುಷೋತ್ತಮ

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಿಕ್ಕಹಾಗಡೆ ಗ್ರಾಮದ ರಸ್ತೆ ಬದಿಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ವಾಹನಗಳನ್ನು ನಿಲುಗಡೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ. ಕೇಳೋಕೆ ಹೋದ್ರೆ ಗಲಾಟೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಲೇಜಿನ ವಿರುದ್ಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಟೆಲಿಲಾ ಸಂಸ್ಥೆಯ ಲೀಗಲ್ ಅಡ್ವೈಸರ್, ವಕೀಲ ಪುರುಷೋತ್ತಮ ದೂರು ನೀಡಿದ್ದಾರೆ.

ಖುದ್ದು ರಸ್ತೆ ಬದಿಯಲ್ಲಿರುವ ವಾಹನಗಳನ್ನು ಚಿತ್ರೀಕರಣ ಮಾಡಿ ಆನೇಕಲ್ ಪೊಲೀಸರಿಗೆ ನೀಡಿದ್ದಾರೆ. ಪ್ರತಿಷ್ಠಿತ ಅಲಯನ್ಸ್ ಕಾಲೇಜಿನ ಸುತ್ತಮುತ್ತ ಪ್ರತಿನಿತ್ಯ ಟ್ರಾಫಿಕ್ ಕಿರಿಕಿರಿಯನ್ನು ಸಾರ್ವಜನಿಕರು ಅನುಭವಿಸುತ್ತಿದ್ದಾರೆ. ಅಲ್ಲದೇ ಗಾಂಜಾ ಮತ್ತಿನಲ್ಲಿರೋ ವಿದ್ಯಾರ್ಥಿಗಳಿಂದ ಸಾಕಷ್ಟು ಅಪಘಾತಗಳೂ ನಡೆದಿವೆ. ಜೊತೆಗೆ ನಡುರಸ್ತೆಯಲ್ಲೇ ವಿದ್ಯಾರ್ಥಿಗಳು ಅಸಭ್ಯವಾಗಿ ವರ್ತಿಸುತ್ತಾರೆ ಎಂದೂ ಆರೋಪಿಸಲಾಗಿದೆ.

ಚಿಕ್ಕಹಾಗಡೆ ಮುಖ್ಯರಸ್ತೆಯಲ್ಲಿಯೇ ವಿದ್ಯಾರ್ಥಿಗಳಿಂದ ಸಾಕಷ್ಟು ಕಿರಿಕಿರಿ ಉಂಟಾಗುತ್ತಿದೆ. ಹೀಗಾಗಿ ಕಾಲೇಜಿನ ಆಡಳಿತ ಮಂಡಳಿ ಈ ಬಗ್ಗೆ ಗಮನಹರಿಸಿ ಅದೇ ಕಾಲೇಜಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಡಬೇಕೆಂದು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Edited By :
Kshetra Samachara

Kshetra Samachara

29/05/2022 02:31 pm

Cinque Terre

2.45 K

Cinque Terre

0

ಸಂಬಂಧಿತ ಸುದ್ದಿ