ಬೆಂಗಳೂರು : ಆಸ್ತಿ ತಂತ್ರಾಂಶ ಜಾರಿಗೆ ಬಿಬಿಎಂಪಿ ಚಿಂತನೆ ನಡೆಸಿದೆ.
ಬೆಂಗಳೂರು ಒನ್ ಸೆಂಟರ್ ಗಳ ಮೂಲಕ ತಂತ್ರಾಂಶ ಬಳಕೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರತಿಯೊಂದು ಆಸ್ತಿಯ ಮಾಹಿತಿ ಇಲ್ಲಿ ಸಿಗಲಿದೆ. ಮುಂದಿನ ದಿನಗಳಲ್ಲಿ ಖಾತಾ ನೇರವಾಗಿ ಡಿಜಿಲಾಕರ್ ವ್ಯವಸ್ಥೆ ಜಾರಿಗೆ ಬರಲಿದ್ದು, ಪಶ್ಚಿಮ ಮತ್ತು ದಕ್ಷಿಣ ಭಾಗದಲ್ಲಿ ಮೊದಲು ಪ್ರಯೋಗ ಆರಂಭಿಸಲಾಗುತ್ತಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಾ.ದೀಪಕ್ ಮಾಹಿತಿ ನೀಡಿದರು.
ಫ್ಲೆಕ್ಸ್ ಬ್ಯಾನರ್ ಹಾವಳಿ ಕುರಿತು ಪ್ರತಿಕ್ರಿಯಿಸಿ ನಿಷೇಧ ಇದ್ದರೂ ಅನಧಿಕೃತವಾಗಿ ಫ್ಲೆಕ್ಸ್ ಹಾಕುವ ಕೆಲಸ ಬೆಳಕಿಗೆ ಬರುತ್ತಿದೆ. ಬ್ಯಾನರ್ ನಲ್ಲಿ ಇನ್ನುಮುಂದೆ ಯಾರು ಶುಭಕೋರುತ್ತಾರೋ ಅವರಿಗೆ ದಂಡ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಬ್ಯಾನರ್ ತೆಗೆಯುವ ವೆಚ್ಚವನ್ನು ಅವರಿಂದಲೇ ಭರಿಸಲಾಗುವುದು. ಪ್ರಧಾನಿ ನರೇಂದ್ರ
ಮೋದಿ ಕಾರ್ಯಕ್ರಮ ಹಿನ್ನೆಲೆ ಬ್ಯಾನರ್ ಹಾಕುವ ವಿಚಾರವಾಗಿ ಕೆಲ ಕಡೆಗಳಲ್ಲಿ ಫ್ಲೆಕ್ಸ್ ಬ್ಯಾನರ್ ಹಾಕಲು ಮುಖ್ಯ ಆಯುಕ್ತರು ಅನುಮತಿ ನೀಡಿದ್ದಾರೆ ಎಂದರು.
ಬಿಬಿಎಂಪಿ ವಾರ್ಡ್ ಮರುವಿಂಗಡನೆ ಮಾಡಿ ನಗರಾಭಿವೃದ್ಧಿ ಇಲಾಖೆಗೆ ನೀಡಲಾಗಿದೆ. ನಗರಾಭಿವೃದ್ಧಿ ಇಲಾಖೆ ಸರ್ಕಾರಕ್ಕೆ ಕಳುಹಿಸಿದ ಬಳಿಕ ಅನುಮೋದನೆ ಸಿಗಲಿದೆ. ಸರ್ಕಾರ ಅನುಮೋದನೆ ಸಿಕ್ಕ ಬಳಿಕ ಬಿಬಿಎಂಪಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.
ವರದಿ- ಗಣೇಶ್ ಹೆಗಡೆ
Kshetra Samachara
17/06/2022 03:54 pm