ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್ ತಯಾರಿಕಾ ಘಟಕಗಳ ಮೇಲೆ ದಿಢೀರ್ ದಾಳಿ

ವರದಿ:- ಗೀತಾಂಜಲಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶ್ಚಿಮ ವಲಯ ವ್ಯಾಪ್ತಿಯ ಗಾಂಧಿನಗರ ವಾರ್ಡ್ ನಂಬರ್‌ 94ರ ವ್ಯಾಪ್ತಿಯ ಶೇಷಾದ್ರಿಪುರ ಪೊಲೀಸ್ ಠಾಣೆಯ ಸುತ್ತಮುತ್ತಲಿನ ಪ್ರದೇಶದಲ್ಲಿರುವ 3 ಫ್ಲೆಕ್ಸ್, ಬ್ಯಾನರ್ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ 12 ಪ್ಲಾಸ್ಟಿಕ್ ರೋಲ್‌ಗಳನ್ನು ಜಪ್ತಿ ಮಾಡಲಾಗಿದೆ.

ನಗರದ ಸಾರ್ವಜನಿಕರ ಸ್ಥಳಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಸ್, ಪೋಸ್ಟರ್ಸ್ ಹಾಕುವುದನ್ನು ನಿಷೇಧಿಸಲಾಗಿದ್ದು, ಪಾಲಿಕೆ ವ್ಯಾಪ್ತಿಯ ಎಲ್ಲಾ ವಲಯಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರುವುಗೊಳಿಸಲಾಗುತ್ತಿದೆ. ಈ ಸಂಬಂಧ ಸೋಮವಾರ ವಲಯ ಆಯುಕ್ತ ಡಾ. ದೀಪಕ್, ಮಾಹಿತಿ ತಂತ್ರಜ್ಞಾನ ನಿರ್ದೇಶಕ ಸೂರ್ಯ ಸೇನ್ ಅವರ ನೇತೃತ್ವದಲ್ಲಿ 3 ಫ್ಲೆಕ್ಸ್/ಬ್ಯಾನರ್ಸ್ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಲಾಗಿದೆ.

Edited By : Somashekar
Kshetra Samachara

Kshetra Samachara

02/08/2022 11:36 am

Cinque Terre

2.46 K

Cinque Terre

0

ಸಂಬಂಧಿತ ಸುದ್ದಿ